Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ದೂರು ದಾಖಲು

Varthur Santhosh

Krishnaveni K

ಬೆಂಗಳೂರು , ಬುಧವಾರ, 26 ಜೂನ್ 2024 (16:44 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ವಿರುದ್ಧ ಈಗ ಮತ್ತೊಂದು ದೂರು ದಾಖಲಾಗಿದೆ. ಪ್ರಾಣಿ ಸಾಗಾಟ ನಿಯಮವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಹಿಂದೆ ಬಿಗ್ ಬಾಸ್ ನಲ್ಲಿದ್ದಾಗ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದರು. ಕೆಲವು ದಿನ ನ್ಯಾಯಾಂಗ ಬಂಧನದಲ್ಲಿದ್ದ ವರ್ತೂರು ಜಾಮೀನು ಪಡೆದು ಹೊರಬಂದು ಮತ್ತೆ ಬಿಗ್ ಬಾಸ್ ನಲ್ಲಿ ಸ್ಪರ್ಧೆ ಮಾಡಿದ್ದರು. ಇದೀಗ ಮತ್ತೊಮ್ಮೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಳ್ಳಿಕಾರ್ ರೇಸ್ ಮಾಡಲು ಮುಂದಾಗಿರುವ ವರ್ತೂರು ಸಂತೋಷ್ ಪ್ರಾಣಿ ಸಾಗಾಟ ನಿಯಮ ಉಲ್ಲಂಘಿಸಿದ್ದಾರೆಂದು ಅವರ ಮೇಲೆ ಆರೋಪ ಹೊರಿಸಲಾಗಿದೆ. ಅಸುರಕ್ಷಿತವಾಗಿ ಪ್ರಾಣಿಗಳನ್ನು ಸಾಗಿಸಿದ್ದಾರೆ ಎಂದು ಆರೋಪ ಎದುರಾಗಿದೆ. ಈ ಬಗ್ಗೆ ವರ್ತೂರು ಸಂತೋಷ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.

ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎಂಬವರು ವರ್ತೂರು ವಿರುದ್ಧ ದೂರು ಸಲ್ಲಿಸಿದ್ದರು. ಒಂದೇ ಟ್ರಕ್ ನಲ್ಲಿ ಒಂಭತ್ತು ಹೋರಿಗಳು ಮತ್ತು ಹಲವು ವಸ್ತುಗಳನ್ನು ತುಂಬಿ ಕಳುಹಿಸಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಶ್ರೀಲೀಲಾ: ತಿರುಪತಿ ತಿಮ್ಮಪ್ಪನ ದರ್ಶನ