ಬೆಂಗಳೂರು: ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಯಕ್ಷಗಾನ ಕಲೆಗೆ ಅವಮಾನ ಮಾಡಿದ್ದಕ್ಕೆ ಆಕ್ಷೇಪಗಳು ಕೇಳಿಬಂದ ಹಿನ್ನಲೆಯಲ್ಲಿ ಜೀ ಕನ್ನಡ ವಾಹಿನಿ ಕ್ಷಮೆ ಯಾಚಿಸಿದೆ.
ಕಳೆದ ವಾರ ಪ್ರಸಾರವಾದ ಸಂಚಿಕೆಯಲ್ಲಿ ಯಕ್ಷಗಾನ ವೇಷಧರಿಸಿ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದು ಯಕ್ಷಗಾನ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ಕಂಡುಬಂದ ಹಿನ್ನಲೆಯಲ್ಲಿ ಜೀ ವಾಹಿನಿ ಸೋಷಿಯಲ್ ಮೀಡಿಯಾ ಮೂಲಕ ಪ್ರಕಟಣೆ ನೀಡಿದೆ.
ಕಳೆದ ಪ್ರಸಾರವಾದ ಯಕ್ಷಗಾನ ಕೆಲವರ ಭಾವನೆಗಳಿಗೆ ಧಕ್ಕೆಯಾಗಿದ್ದು ನಮ್ಮ ಗಮನಕ್ಕೆ ಬಂದಿದೆ. ಇದು ಉದ್ದೇಶಪೂರ್ವಕವಾಗಿ ನಡೆದಿದ್ದಲ್ಲ ಮತ್ತು ಇದಕ್ಕೆ ಈ ಮೂಲಕ ಕ್ಷಮೆ ಯಾಚಿಸುತ್ತೇವೆ ಎಂದು ಪ್ರಕಟಣೆ ಮೂಲಕ ಕ್ಷಮೆ ಯಾಚಿಸಿದೆ. ಹಾಗಿದ್ದರೂ ಕೆಲವರು ಕೇವಲ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಕೇಳಿದರೆ ಸಾಲದು, ಕಾರ್ಯಕ್ರಮದ ವೇದಿಕೆಯಲ್ಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.