ಕನ್ನಡದಲ್ಲಿ ಹಿಟ್ ಆದ ಸೀತಾರಾಮ ಧಾರವಾಹಿ ಈಗ ಹಿಂದಿಗೆ ರಿಮೇಕ್

Krishnaveni K
ಭಾನುವಾರ, 24 ಮಾರ್ಚ್ 2024 (11:48 IST)
Photo Courtesy: Twitter
ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಸೂಪರ್ ಹಿಟ್ ಆದ ಸೀತಾರಾಮ ಧಾರವಾಹಿ ಈಗ ಹಿಂದಿಗೆ ರಿಮೇಕ್ ಆಗುತ್ತಿದೆ. ಇದರ ಪ್ರೋಮೋಗಳು ಈಗಾಗಲೇ ಹರಿದಾಡುತ್ತಿದೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹಿಟ್ ಧಾರವಾಹಿ ಸೀತಾರಾಮ. ಈ ಧಾರವಾಹಿಯಲ್ಲಿ ಗಗನ್ ಚಿನ್ನಪ್ಪ ಮತ್ತು ವೈಷ್ಣವಿ ಗೌಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಬೇಬಿ ರೀತು ಸಿಂಗ್ ಮುಗ್ಧ ಅಭಿನಯ ಎಲ್ಲರಿಗೂ ಇಷ್ಟವಾಗುತ್ತಿದೆ. ಈ ಧಾರವಾಹಿ ಈಗ ಟಾಪ್ 5 ರೊಳಗೇ ಟಿಆರ್ ಪಿ ಪಡೆದುಕೊಳ್ಳುತ್ತಿದೆ.

ಕನ್ನಡದ ಈ ಸೂಪರ್ ಹಿಟ್ ಧಾರವಾಹಿ ಈಗ ಹಿಂದಿಗೆ ರಿಮೇಕ್ ಆಗುತ್ತಿದೆ. ‘ಮೈ ಹೂ ಸಾಥ್ ತೇರೆ’ ಎನ್ನುವ ಶೀರ್ಷಿಕೆಯೊಂದಿಗೆ ಹಿಂದಿ ಜೀ ಟಿವಿಯಲ್ಲಿ ಪ್ರಸಾರವಾಗಲಿದೆ. ಇದರ ಪ್ರೋಮೋಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.  ಹಿಂದಿಯಲ್ಲಿ ಗಗನ್ ಚಿನ್ನಪ್ಪ ಪಾತ್ರವನ್ನು ಕರಣ್ ವೋಹ್ರಾ ಮತ್ತು ವೈಷ್ಣವಿ ಪಾತ್ರವನ್ನು ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ.

ಒಂದೇ ಒಂದು ಬದಲಾವಣೆಯೆಂದರೆ ಕನ್ನಡದಲ್ಲಿ ನಾಯಕಿಗೆ ಮಗಳಿರುವುದಾಗಿ ತೋರಿಸಲಾಗಿದೆ. ಆದರೆ ಹಿಂದಿಯಲ್ಲಿ ಮಗನೆಂದು ತೋರಿಸಲಾಗುತ್ತಿದೆ. ಅಂದ ಹಾಗೆ ಸೀತಾರಾಮ ಧಾರವಾಹಿ ಮರಾಠಿಯ ಮಜಿ ತುಜಿ ರೆಶಿಮಗತ್’ ಧಾರವಾಹಿಯ ರಿಮೇಕ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments