Publish Date: Sat, 25 Mar 2017 (07:19 IST)
Updated Date: Sat, 25 Mar 2017 (07:22 IST)
ಬೆಂಗಳೂರು: ಕನ್ನಡದ ಜನಪ್ರಿಯ ಚಾನೆಲ್ ಗಳಾದ ಸ್ಟಾರ್ ಸುವರ್ಣ ವಾಹಿನಿ ಮತ್ತು ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವ ಮೂರು ಧಾರವಾಹಿಗಳಿಗೆ ರಾಜ್ಯ ಸರ್ಕಾರ ನೋಟೀಸ್ ಜಾರಿ ಮಾಡಿದೆ.
ಸ್ಟಾರ್ ಸುವರ್ಣದಲ್ಲಿ ಮೂಡಿ ಬರುತ್ತಿರುವ ‘ನೀಲಿ’ ಧಾರವಾಹಿ ಮತ್ತು ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಗಂಗಾ’ ಹಾಗೂ ‘ಅಂಜಲಿ’ ಧಾರವಾಹಿಗಳಲ್ಲಿ ಭೂತ, ಪ್ರೇತ ಕತೆಗಳನ್ನು ವೈಭವೀಕರಿಸುತ್ತಿರುವುದಕ್ಕೆ ನೋಟೀಸ್ ಜಾರಿ ಮಾಡಲಾಗಿದೆ.
ಈ ವಿಷಯವನ್ನು ಸ್ವತಃ ಗೃಹ ಸಚಿವ ಜಿ. ಪರಮೇಶ್ವರ್ ಸದನದಲ್ಲಿ ತಿಳಿಸಿದ್ದಾರೆ. ವಿಶೇಷವೆಂದರೆ ಈ ಧಾರವಾಹಿಗಳಿಗೆ ನೋಟೀಸ್ ಜಾರಿ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಇದುವರೆಗೆ ಅವರಿಗೆ ಯಾವುದೇ ಉತ್ತರ ಬಂದಿಲ್ಲ. ಒಂದು ವೇಳೆ ಪ್ರತಿಕ್ರಿಯೆ ನೀಡದಿದ್ದರೆ ಈ ವಿಚಾರ ನೇರವಾಗಿ ಕೇಂದ್ರ ಪ್ರಸಾರ ಖಾತೆಗೆ ವರ್ಗಾವಣೆಯಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ