Publish Date: Thu, 18 Jan 2018 (08:36 IST)
Updated Date: Thu, 18 Jan 2018 (08:38 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರ ಪೈಕಿ ಬಿಗ್ ಬಾಸ್ ವಿನ್ನರ್ ಒಳ್ಳೆ ಹುಡುಗ ಪ್ರಥಮ್ ಕೂಡಾ ಒಬ್ಬರು. ಆದರೆ ಇದೀಗ ತಮಗೆ ಸಂಬಂಧಪಡದ ವಿಷಯದ ಬಗ್ಗೆ ಮಾತನಾಡಿ ಜಾಡಿಸಿಕೊಂಡಿದ್ದಾರೆ.
ಹಿಂದೂ ಸಂಘಟನೆ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿ, ನಂತರ ತಮ್ಮನ್ನು ಎನ್ ಕೌಂಟರ್ ಮಾಡಲು ಯೋಜನೆ ನಡೆದಿತ್ತು ಎಂದು ಆರೋಪಿಸಿದ್ದರು. ಇದರ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡ ಪ್ರಥಮ್ ಬಿಜೆಪಿ ಪರ ಮಾತನಾಡಿದ್ದಾರೆ.
ಪ್ರವೀಣ್ ತೊಗಾಡಿಯಾ ಈ ರೀತಿ ವಿನಾಕಾರಣ ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡಿದರೆ ಕರ್ನಾಟಕದಲ್ಲಿ ಹಿಂದೂಗಳ ಮತ ವಿಭಜನೆಯಾಗುತ್ತದೆ ಎಂದು ಪ್ರಥಮ್ ಬರೆದುಕೊಂಡಿದ್ದರು. ಇದರ ಬಗ್ಗೆ ಕೆಲವರು ಕಾಮೆಂಟ್ ಮಾಡಿದ್ದು, ನಿಮಗೆ ಯಾಕೆ ಬೇಕು ಇಲ್ಲದ ಉಸಾಬರಿ ಎಂದು ಪ್ರಶ್ನಿಸಿದ್ದಾರೆ. ಈಗ ನಿಮ್ಮ ಬೆಂಬಲ ಯಾರಿಗೆ ಎನ್ನುವುದು ಸ್ಪಷ್ಟವಾಯಿತು ಎಂದು ಕೆಲವರು ಹೇಳಿದರೆ ಇನ್ನು ಕೆಲವರು ಬಿಜೆಪಿಗೆ ಬಕೆಟ್ ಹಿಡಿಯುತ್ತಿರುವುದರ ಹಿಂದಿನ ಉದ್ದೇಶವೇನು ಎಂದು ಜಾಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ