ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ನಟಿ ಪ್ರೇಮಾ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಪ್ರೇಮಾ ನಂತರ ರಂಗಕರ್ಮಿ, ಪತ್ರಕರ್ತ ಪ್ರಕಾಶ್ ಬೆಳವಾಡಿ ಅತಿಥಿಯಾಗಲಿದ್ದಾರೆ.
ಪ್ರಕಾಶ್ ಬೆಳವಾಡಿ ಕಾರ್ಯಕ್ರಮಕ್ಕೆ ಆಗಮಿಸಿ ತಮ್ಮ ಜೀವನ ಕತೆಯನ್ನು ಬಿಚ್ಚಿಡಲಿದ್ದಾರೆ. ಪ್ರಕಾಶ್ ಬೆಳವಾಡಿ ಅತಿಥಿಯಾಗಿ ಬರುತ್ತಿರುವುದಕ್ಕೆ ವೀಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೇವಲ ಸಿನಿಮಾ ಮಾತ್ರವಲ್ಲದೆ, ಇತರ ಕ್ಷೇತ್ರದಲ್ಲಿರುವವರನ್ನೂ ಗುರುತಿಸಿ ಎಂದು ವೀಕ್ಷಕರು ಒತ್ತಾಯಿಸುತ್ತಲೇ ಇರುತ್ತಾರೆ. ಇದೀಗ ರಂಗಭೂಮಿ ಹಿನ್ನಲೆಯ ವ್ಯಕ್ತಿಯನ್ನು ಜೀ ಕನ್ನಡ ವೀಕೆಂಡ್ ವಿತ್ ರಮೇಶ್ ನ ಸಾಧಕರ ಸೀಟ್ ನಲ್ಲಿ ಕೂರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!