ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗೆ ಈ ಖ್ಯಾತ ಕಿರುತೆರೆ ನಟಿ?

ಗುರುವಾರ, 3 ಅಕ್ಟೋಬರ್ 2019 (09:10 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್ ಬಾಸ್ ಕನ್ನಡ ಶೋಗೆ ಕ್ಷಣಗಣನೆ ಆರಂಭವಾಗಿದ್ದು, ಯಾವೆಲ್ಲಾ ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಬಹುದು ಎಂಬ ಬಗ್ಗೆ ಹಲವು ಊಹಾಪೋಹಗಳು ಬರುತ್ತಲೇ ಇವೆ.


ಇದೀಗ ಕಿರುತೆರೆಯ ಖ್ಯಾತ ನಟಿ ಪುಟ್ಟಗೌರಿ ಮದುವೆ ಧಾರವಾಹಿ ಖ್ಯಾತಿಯ ನಾಯಕಿ ನಟಿ ರಂಜಿನಿ ರಾಘವನ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಸದ್ಯಕ್ಕೆ ತಮ್ಮ ಧಾರವಾಹಿಗಳಿಂದ ಬಿಡುವು ಪಡೆದಿರುವ ರಂಜಿನಿ ಸಿನಿಮಾ ಕೆಲಸಗಳನ್ನೂ ಮುಗಿಸಿಕೊಟ್ಟಿದ್ದಾರೆ.

ಇದಲ್ಲದೆ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಸದ್ಯದಲ್ಲೇ ಹೊಸ ಶೋನೊಂದಿಗೆ ತೆರೆಗೆ ಮರಳುವುದಾಗಿ ರಂಜಿನಿ ಸುಳಿವು ಕೊಟ್ಟಿದ್ದಾರೆ. ಹೀಗಾಗಿ ಅವರು ಬಿಗ್ ಬಾಸ್ ನಲ್ಲಿ ಪಾಲ್ಗೊಳ್ಳಬಹುದು ಎಂಬ ಗುಸು ಗುಸು ಜೋರಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದಿನಿಂದ ಮೆಗಾಸ್ಟಾರ್ ಚಿರಂಜೀವಿ ಸೈರಾ ಅಬ್ಬರ