ಬಿಗ್ ಬಾಸ್ ನಿಂದ ಬಂದ ಹಣದಲ್ಲಿ ದುಬಾರಿ ಕಾರು ಖರೀದಿಸಿದ ತುಕಾಲಿ ಸಂತೋಷ್’

Krishnaveni K
ಸೋಮವಾರ, 4 ಮಾರ್ಚ್ 2024 (11:50 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಇದೀಗ ದುಬಾರಿ ಬೆಲೆಯ ಕಾರು ಖರೀದಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ತುಕಾಲಿ ಸಂತೋಷ್ ಈ ಮೊದಲು ಜೀ ಕನ್ನಡದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಜನರಿಗೆ ಚಿರಪರಿಚಿತರಾದವರು. ಬಳಿಕ ಧಾರವಾಹಿ, ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರ ಮಾಡುತ್ತಿದ್ದರು. ಆದರೆ ಬಿಗ್ ಬಾಸ್ ಶೋಗೆ ಹೋದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿತ್ತು.

ಬಿಗ್ ಬಾಸ್ ಫೈನಲ್ ತನಕ ಬಂದಿದ್ದ ತುಕಾಲಿ ಬಳಿಕ ಕಪ್ ಗೆಲ್ಲಲು ಸಾಧ‍್ಯವಾಗಲಿಲ್ಲ. ಆದರೆ ತುಕಾಲಿ ಮತ್ತು ಅವರ ಪತ್ನಿ ಮಾನಸಾ ಕಾಮಿಡಿ ಜನರ ಮನಗೆದ್ದಿತ್ತು. ಬಿಗ್ ಬಾಸ್ ಶೋನಲ್ಲಿ ಅವರಿಗೆ ಉತ್ತಮ ಸಂಭಾವನೆಯನ್ನೇ ನೀಡಲಾಗುತ್ತಿತ್ತು. ಅಲ್ಲದೆ, ಫೈನಲ್ ತನಕ ಬಂದಿದ್ದರಿಂದ ಹೆಚ್ಚುವರಿ ಬಹುಮಾನ ಹಣ ಸಿಕ್ಕಿತ್ತು.

ಇದೀಗ ಅದೇ ಹಣದಿಂದ ಕಿಯಾ ಮಾಡೆಲ್ ಕಾರು ಖರೀದಿ ಮಾಡಿದ್ದಾರೆ. ಇದರ ಬೆಲೆ ಸುಮಾರು 20 ಲಕ್ಷ ರೂ.ಗಳವರೆಗಿದೆ. ಪತ್ನಿ ಜೊತೆಗೆ ಶೋ ರೂಂಗೆ ತೆರಳಿ ಬಿಳಿ ಬಣ್ಣದ ಕಿಯಾ ಕಾರು ಪಡೆದುಕೊಳ್ಳುತ್ತಿರುವ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments