ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಕಾರಣಕ್ಕೆ ಈಗ ಬಿಗ್ ಬಾಸ್ ಕನ್ನಡ 10 ನೇ ಸೀಸನ್ ಸ್ಪರ್ಧಿಯಾಗಿರುವ ವರ್ತೂರ್ ಸಂತೋಷ್ ರನ್ನು ಬಂಧಿಸಲಾಗಿದೆ.
ಭಾನುವಾರ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣ ಸಂಬಂಧ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ.
ಈ ನಡುವೆ ವರ್ತೂರ್ ಸಂತೋಷ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದಾಗ ಅವರ ಕೊರಳಿನಲ್ಲಿದ್ದ ಹುಲಿ ಉಗುರಿನ ಪೆಂಡೆಂಟ್ ಇರುವ ಚೈನು ಗಮನ ಸೆಳೆದಿತ್ತು. ಈ ಸಂಬಂಧ ಅವರ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲಾಗಿತ್ತು. ಈ ಸಂಬಂಧ ಅವರನ್ನು ಬಂಧಿಸಲಾಗಿದೆ. ಈ ರೀತಿ ಆಗುತ್ತಿರುವುದು ಬಿಗ್ ಬಾಸ್ ಕನ್ನಡ ಇತಿಹಾಸದಲ್ಲೇ ಇದೇ ಮೊದಲು.