Publish Date: Mon, 02 May 2022 (08:02 IST)
Updated Date: Mon, 02 May 2022 (08:37 IST)
ನವದೆಹಲಿ : 2022ನೇ ಸಾಲಿನ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು ನೂತನ ದಾಖಲೆ ಬರೆದಿದೆ.
ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 1.67,540 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಜಿಎಸ್ಟಿ ತೆರಿಗೆ ಸಂಗ್ರಹವು ಕಳೆದ ಐದು ವರ್ಷಗಳಲ್ಲಿ ಮೊದಲ ಬಾರಿಗೆ 1.5 ಲಕ್ಷ ಕೋಟಿ ರೂ. ದಾಟಿ ನೂತನ ದಾಖಲೆ ಬರೆದಿದೆ.
ಅಲ್ಲದೆ ಕಳೆದ ವರ್ಷದ ಏಪ್ರಿಲ್ ತಿಂಗಳಿಗಿಂತ ಶೇ.20 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಏಪ್ರಿಲ್ 2022ರಲ್ಲಿ ಜಿಎಸ್ಟಿ ಆದಾಯವು ಒಟ್ಟು 1,67,540 ಕೋಟಿ ರೂಪಾಯಿ ಸಂಗ್ರಹವಾಗಿದೆ.
ಇದರಲ್ಲಿ ಸಿಜಿಎಸ್ ಟಿ 33,159 ಕೋಟಿ ರೂಪಾಯಿ, ಎಸ್ಜಿಎಸ್ ಟಿ 41,793 ಕೋಟಿ ರೂಪಾಯಿ, ಐಜಿಎಸ್ಟಿ 81,939 ಮತ್ತು ಮತ್ತು ಪರಿಹಾರ ಸೆಸ್ 10,649 ಕೋಟಿ ಆಗಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ. ಕಳೆದ ಮಾರ್ಚ್ನಲ್ಲಿ 1,42,095 ಕೋಟಿ ರೂ. ಸಂಗ್ರಹವಾಗಿ ಈ ಹಿಂದಿನ ದಾಖಲೆ ನಿರ್ಮಿಸಿತ್ತು. ಇದೀಗ ಇನ್ನಷ್ಟು ಏರಿಕೆ ಕಂಡು ಏಪ್ರಿಲ್ನಲ್ಲಿ ಅತಿ ಹೆಚ್ಚು ಜಿಎಸ್ಟಿ ಸಂಗ್ರಹವಾಗಿದೆ.