Select Your Language

Notifications

webdunia
webdunia
webdunia
Tuesday, 8 April 2025
webdunia

ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ

ಓಮಿಕ್ರಾನ್
ಬೆಂಗಳೂರು , ಭಾನುವಾರ, 26 ಡಿಸೆಂಬರ್ 2021 (10:43 IST)
ಬೆಂಗಳೂರು : ಕೊರೊನಾ, ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಮುಖ್ಯಮಂತ್ರಿ ಅವರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡಿ.28 ರಿಂದ 10 ದಿನಗಳ ಕಾಲ ನೈಜ್ ನೈಟ್ ಕಫ್ರ್ಯೂ ಜಾರಿ ಇರಲಿದೆ.

ಎಲ್ಲ ಸಂಭ್ರಮಾಚಚರಣೆ, ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ನಿಷೇಧವನ್ನು ಹೇರಲಾಗಿದೆ. ಪಬ್, ಬಾರ್, ರೇಸ್ಟೋರೆಂಟ್, ಹೋಟೆಲ್ ಎಲ್ಲವೂ ಬಂದ್ ಆಗಲಿದೆ ಎಂದಿದ್ದಾರೆ.

ಮಂಗಳವಾರ ರಾತ್ರಿ 10 ಗಂಟೆಯಿಂದಲೇ ಎಲ್ಲವೂ ಬಂದ್ ಆಗಲಿದೆ. 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ಚವಟಿಕೆಗಳಿಗೂ ನಿರ್ಬಂಧವನ್ನು ಹೇರಲಾಗಿದೆ. ಅಂತರ್ ರಾಜ್ಯ ಪ್ರಯಾಣಕಷ್ಟೆ ರಾತ್ರಿ 10 ಗಣಟೆಗ ನಂತರ ಅವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಟ್ಯೂಷನ್ ಹೋಗುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಾಮುಕರು!