ಬೆಂಗಳೂರು : ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಿದೆ.
ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.