Select Your Language

Notifications

webdunia
webdunia
webdunia
webdunia

ಸೆ.9ರಂದು ವರ್ಚುವಲ್ ಮಾದರಿಯಲ್ಲಿ 13ನೇ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ: ಮೋದಿ ಅಧ್ಯಕ್ಷತೆ

13th BRICS nations summit on virtual model on September 9: Modi presidency
ನವದೆಹಲಿ , ಮಂಗಳವಾರ, 7 ಸೆಪ್ಟಂಬರ್ 2021 (09:45 IST)
ನವದೆಹಲಿ : ಭಾರತ 2021ರ ಬ್ರಿಕ್ಸ್ ರಾಷ್ಟ್ರಗಳ ಅಧ್ಯಕ್ಷತೆ ವಹಿಸಿರುವ ಭಾಗವಾಗಿ ಪ್ರಧಾನಿ ನರೇಂದ್ರಮೋದಿ ಇದೇ 9ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ 13ನೇ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಈ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಗ್ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಶೃಂಗಸಭೆಯಲ್ಲಿ ಈ ವರ್ಷಕ್ಕೆ ಸಂಬಂಧಿಸಿದ ಪ್ರಗತಿಯ ವಿವರಗಳನ್ನು ಮಂಡಿಸಲಿದ್ದಾರೆ.
ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸುತ್ತಿರುವುದು ಎರಡನೇ ಬಾರಿ: ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು 2016ರಲ್ಲಿ ಗೋವಾದಲ್ಲಿ ನಡೆದ ಶೃಂಗಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದರು.
ಮುಂದುವರಿಕೆ, ಸದೃಢತೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ ಅಂತರ್ ಸಹಕಾರ ಎಂಬುದು ಈ ಬಾರಿಯ ಬ್ರಿಕ್ಸ್ ಸಮಾವೇಶದ ಧ್ಯೇಯವಾಕ್ಯವಾಗಿದೆ. ಭಾರತ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಡಿಜಿಟಲ್ ಮತ್ತು ತಂತ್ರಜ್ಞಾನ ಸಾಧನಗಳ ಬಳಕೆ ಮತ್ತು ಜನರ ನಡುವಿನ ಸಂವಹನ ಹೆಚ್ಚಳಕ್ಕೆ ಒತ್ತು ನೀಡಿದೆ. ಶೃಂಗಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ನಾಯಕರು ಕೋವಿಡ್-೧೯ ಸಾಂಕ್ರಾಮಿಕ ಸೋಂಕಿನ ಪರಿಣಾಮಗಳು ಮತ್ತು ಸಮಕಾಲೀನ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೊಮ್ಮಾಯಿ ಭೇಟಿಯಾದ ಹೆಚ್'ಡಿಕೆ ನೇತೃತ್ವದ ನಿಯೋಗ