Webdunia - Bharat's app for daily news and videos

Install App

ಸೆ.9ರಂದು ವರ್ಚುವಲ್ ಮಾದರಿಯಲ್ಲಿ 13ನೇ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ: ಮೋದಿ ಅಧ್ಯಕ್ಷತೆ

Webdunia
ಮಂಗಳವಾರ, 7 ಸೆಪ್ಟಂಬರ್ 2021 (09:45 IST)
ನವದೆಹಲಿ : ಭಾರತ 2021ರ ಬ್ರಿಕ್ಸ್ ರಾಷ್ಟ್ರಗಳ ಅಧ್ಯಕ್ಷತೆ ವಹಿಸಿರುವ ಭಾಗವಾಗಿ ಪ್ರಧಾನಿ ನರೇಂದ್ರಮೋದಿ ಇದೇ 9ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ 13ನೇ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಈ ಸಭೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೇರ್ ಬೋಲ್ಸನಾರೊ, ರಷ್ಯಾ ಅಧ್ಯಕ್ಷ ವ್ಲಾಡಿಮೀರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿಂಗ್ಪಿಂಗ್ ಹಾಗೂ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಪಾಲ್ಗೊಳ್ಳಲಿದ್ದಾರೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ನ್ಯೂ ಡೆವಲಮೆಂಟ್ ಬ್ಯಾಂಕ್ ಅಧ್ಯಕ್ಷ ಮಾರ್ಕೊಸ್ ಟ್ರಾಯ್ಜೊ, ಬ್ರಿಕ್ಸ್ ಉದ್ಯಮ ಮಂಡಳಿ ಅಧ್ಯಕ್ಷ ಓಂಕಾರ್ ಕನ್ವರ್, ಬ್ರಿಕ್ಸ್ ಮಹಿಳಾ ಉದ್ಯಮ ಮೈತ್ರಿ ಅಧ್ಯಕ್ಷೆ ಸಂಗೀತಾ ರೆಡ್ಡಿ ಶೃಂಗಸಭೆಯಲ್ಲಿ ಈ ವರ್ಷಕ್ಕೆ ಸಂಬಂಧಿಸಿದ ಪ್ರಗತಿಯ ವಿವರಗಳನ್ನು ಮಂಡಿಸಲಿದ್ದಾರೆ.
ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸುತ್ತಿರುವುದು ಎರಡನೇ ಬಾರಿ: ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆ ವಹಿಸುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು 2016ರಲ್ಲಿ ಗೋವಾದಲ್ಲಿ ನಡೆದ ಶೃಂಗಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದರು.
ಮುಂದುವರಿಕೆ, ಸದೃಢತೆ ಮತ್ತು ಒಮ್ಮತಕ್ಕಾಗಿ ಬ್ರಿಕ್ಸ್ ಅಂತರ್ ಸಹಕಾರ ಎಂಬುದು ಈ ಬಾರಿಯ ಬ್ರಿಕ್ಸ್ ಸಮಾವೇಶದ ಧ್ಯೇಯವಾಕ್ಯವಾಗಿದೆ. ಭಾರತ, ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಭಯೋತ್ಪಾದನೆ ನಿಗ್ರಹ, ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಗೆ ಡಿಜಿಟಲ್ ಮತ್ತು ತಂತ್ರಜ್ಞಾನ ಸಾಧನಗಳ ಬಳಕೆ ಮತ್ತು ಜನರ ನಡುವಿನ ಸಂವಹನ ಹೆಚ್ಚಳಕ್ಕೆ ಒತ್ತು ನೀಡಿದೆ. ಶೃಂಗಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳ ನಾಯಕರು ಕೋವಿಡ್-೧೯ ಸಾಂಕ್ರಾಮಿಕ ಸೋಂಕಿನ ಪರಿಣಾಮಗಳು ಮತ್ತು ಸಮಕಾಲೀನ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಮುಂದಿನ ಸುದ್ದಿ
Show comments