Select Your Language

Notifications

webdunia
webdunia
webdunia
Friday, 11 April 2025
webdunia

ರಾಜ್ಯದಲ್ಲಿ 2 ದಿನ ಭಾರೀ ಮಳೆ

ಹವಾಮಾನ ಇಲಾಖೆ
ಬೆಂಗಳೂರು , ಗುರುವಾರ, 16 ಸೆಪ್ಟಂಬರ್ 2021 (14:40 IST)
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ , ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ವಿಜಯಪುರ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ʼಕಿಸಾನ್ ಸಮ್ಮಾನ್ ನಿಧಿʼ ಪಡೆಯಲು ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ