Select Your Language

Notifications

webdunia
webdunia
webdunia
webdunia

ಧ್ವನಿವರ್ಧಕ ಅನುಮತಿ ನೀಡಲು 2 ಹಂತದ ಸಮಿತಿ

ಧ್ವನಿವರ್ಧಕ ಅನುಮತಿ ನೀಡಲು 2 ಹಂತದ ಸಮಿತಿ
ನವದೆಹಲಿ , ಬುಧವಾರ, 11 ಮೇ 2022 (09:45 IST)
ಧ್ವನಿವರ್ಧಕಗಳಿಗೆ ಅನುಮತಿ ಕೊಡಲು 2 ಹಂತದಲ್ಲಿ ಸರ್ಕಾರ ಸಮಿತಿ ರಚನೆ ಮಾಡಲಿದೆ. ಕಮಿಷನರೇಟ್ ಜಿಲ್ಲೆಗಳಲ್ಲಿ ಮೊದಲ ಸಮಿತಿ ರಚಿಸಬೇಕು.

ಈ ಸಮಿತಿಯಲ್ಲಿ ಎಸಿಪಿ, ಸ್ಥಳೀಯ ಸಂಸ್ಥೆಯ ಕಾರ್ಯಕಾರಿ ಇಂಜಿನಿಯರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಬ್ಬರು ಸದಸ್ಯರಿರುತ್ತಾರೆ. ಉಳಿದ ಜಿಲ್ಲೆಗಳಲ್ಲಿ 2ನೇ ಸಮಿತಿ ರಚಿಸಬೇಕು. ಇದರಲ್ಲಿ ಡಿವೈಎಸ್ಪಿ, ತಹಸಿಲ್ದಾರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಬ್ಬರು ಸದಸ್ಯರಿರುತ್ತಾರೆ.

ಎಲ್ಲ ಪರಿಶೀಲಿಸಿ ಈ ಸಮಿತಿಗಳು ಧ್ವನಿವರ್ಧಕಗಳಿಗೆ ಅನುಮತಿ ಕೊಡಲಿವೆ. ಸಾರ್ವಜನಿಕ ಸ್ಥಳಗಳಲ್ಲಿ 10 ರಿಂದ 75 ಡೆಸಿಬಲ್, ಖಾಸಗಿ ಸ್ಥಳಗಳಲ್ಲಿ ಸ್ವಂತ ಸೌಂಡ್ ಸಿಸ್ಟಂಗಳ ಬಳಕೆಗೆ 5 ಡಿಸಿಬಲ್ ಶಬ್ಧ ಮಿತಿ ಇರಬೇಕು.

ಹೊರತಾಗಿ ರಾತ್ರಿ 10ರ ಬಳಿಕ ಡ್ರಂ, ಟ್ರಂಪೆಟ್, ಟಂ-ಟಂ, ಇತರೆ ಶಬ್ಧ ಉಂಟು ಮಾಡುವ ಸಾಧನಗಳ ಬಳಕೆಯನ್ನೂ ನಿಷೇಧಿಸಲಾಗಿದೆ ಎಂದು ಆದೇಶ ಪ್ರತಿ ಹೇಳಿದೆ.

ಶಬ್ಧ ಪ್ರಮಾಣ ಎಲ್ಲಿ ಎಷ್ಟಿರಬೇಕು?

•             ಸಾರ್ವಜನಿಕ ಸ್ಥಳ- 10 ರಿಂದ 75 ಡೆಸಿಬಲ್
•             ಖಾಸಗಿ ಸ್ಥಳ – 5 ಡೆಸಿಬಲ್ (ಸ್ವಂತ ಸೌಂಡ್ ಸಿಸ್ಟಂಗಳ ಬಳಕೆ)
•             ಕೈಗಾರಿಕಾ ಪ್ರದೇಶ – ಹಗಲು 75 ಡೆಸಿಬಲ್, ರಾತ್ರಿ 70 ಡೆಸಿಬಲ್
•             ವಾಣಿಜ್ಯ ಚಟುವಟಿಕೆ ಪ್ರದೇಶ – ಹಗಲು 65 ಡೆಸಿಬಲ್, ರಾತ್ರಿ 60 ಡೆಸಿಬಲ್
•             ಜನವಸತಿ ಪ್ರದೇಶ – ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್
•             ಸೈಲೆಂಟ್ ಝೋನ್ (ನಿಶ್ಯಬ್ಧ ವಲಯ) ಹಗಲು 50 ಡೆಸಿಬಲ್, ರಾತ್ರಿ 40 ಡೆಸಿಬಲ್


Share this Story:

Follow Webdunia kannada

ಮುಂದಿನ ಸುದ್ದಿ

ಕೇಬಲ್ ತಂತಿ ಬಳಸಿ ಗರ್ಲ್ ಫ್ರೆಂಡ್ ಕೊಂದ ವ್ಯಕ್ತಿ