ಭಾರತದಲ್ಲಿಂದು 23,529 ಹೊಸ ಕೇಸ್ ಪತ್ತೆ, 311 ಮಂದಿ ಸಾವು

Webdunia
ಗುರುವಾರ, 30 ಸೆಪ್ಟಂಬರ್ 2021 (12:08 IST)
ನವದೆಹಲಿ : ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 23,529 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 311 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಗುರುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,39,980ಕ್ಕೆ ತಲುಪಿದ್ದು, 4,48,062ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,77,020ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 28,178 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,30,14,898ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 15,06,254 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 56,89,56,439 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 88,34,70,578 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments