Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 28,000 ಕೋಟಿ ರೂ. ಹೂಡಿಕೆ

ರಾಜ್ಯದಲ್ಲಿ 28,000 ಕೋಟಿ ರೂ. ಹೂಡಿಕೆ
Bangalore , ಶುಕ್ರವಾರ, 16 ಜುಲೈ 2021 (07:39 IST)
ಬೆಂಗಳೂರು (ಜು. 15): ಎರಡನೇ ಅಲೆ ಬಳಿಕ ಉದ್ಯಮ ವಲಯದಲ್ಲಿ ರಾಜ್ಯ ಸರ್ಕಾರ  28,000 ಕೋಟಿ ರೂ. ಮೊತ್ತದ ಹೂಡಿಕೆ ಒಡಂಬಡಿಕೆ ಒಪ್ಪಂದಕ್ಕೆ ಮುಂದಾಗಿದೆ. 

ಇಲೆಕ್ಟ್ರಿಕ್ ವಾಹನ, ಡೇಟಾ ಸೆಂಟರ್, ಏರೋಸ್ಪೇಸ್ ಹಾಗೂ ರಕ್ಷಣಾ ಸಾಮಗ್ರಿ ಉತ್ಪಾದನಾ ಕ್ಷೇತ್ರಕ್ಕೆ ಸಂಬಂಧಿಸಿದ 23 ಕಂಪನಿಗಳು ರಾಜ್ಯದಲ್ಲಿ ಸುಮಾರು 28,000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವ ಸಂಬಂಧ ಅದಾನಿ ಡೇಟಾ ಸೆಂಟರ್, ಸಿ4ವಿ ಘಟಕ, 23 ಕಂಪನಿ ಜತೆ ಸರ್ಕಾರದೊಂದಿಗೆ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದೆ. ಈ ಮೂಲಕ ಕೋವಿಡ್ ಬಳಿಕ ಉದ್ಯಮ ವಲಯದಲ್ಲಿ ಹೂಡಿಕೆ ಸರ್ಕಾರ ಅತ್ಯಾಸಕ್ತಿ ತೋರಿದ್ದು, ಈ ಮೂಲಕ ರಾಜ್ಯದ ಅಭಿವೃದ್ಧಿ ಜೊತೆಗೆ ಉದ್ಯೋಗ ಅವಕಾಶಗಳ ಸೃಷ್ಟಿಗೆ ಮುಂದಾಗಿರುವುದಾಗಿ ತಿಳಿಸಿದೆ.

ಕರೊನಾ ಸಂಕಷ್ಟದಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದ ಸರ್ಕಾರ ಈ  ಹೂಡಿಕೆ ಪ್ರಸ್ತಾವನೆಗಳು ಹಾಗೂ ಒಪ್ಪಂದಗಳ ಮೂಲಕ ಕರ್ನಾಟಕಕ್ಕೆ 28,000 ಕೋಟಿ ರೂ. ಹೂಡಿಕೆ ಹರಿದು ಬರಲಿದೆ. ಇನ್ವೆಸ್ಟ್ ಕರ್ನಾಟಕ ವೇದಿಕೆಯ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಈ ವೇಳೆ ಕಾಲಮಿತಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಿ ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಈ ಹೂಡಿಕೆ-ಒಪ್ಪಂದಗಳ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕರೊನಾ ಸಂಕಷ್ಟದ ನಡುವೆಯೂ ರಾಜ್ಯ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತುನೀಡಲಾಗಿದೆ. ಅದರ ಫಲವಾಗಿಯೇ ವಿವಿಧ ಕಂಪನಿಗಳು ಹೂಡಿಕೆ ಮಾಡಲು ಬಂದಿವೆ. ಸರ್ಕಾರದ ಉದ್ಯಮ ಸ್ನೇಹಿ ನೀತಿಗಳಿಂದ ಇದು ಸಾಧ್ಯವಾಗಿದೆ. ಕರೊನಾ ಸಂಕಷ್ಟದ ನಡುವೆಯೂ ಕಳೆದ ವರ್ಷದ ಮಾರ್ಚ್ನಿಂದ ಕರ್ನಾಟಕ ಸರ್ಕಾರ 77,000 ಕೋಟಿ ರೂ. ಹೂಡಿಕೆಯ 520ಕ್ಕೂ ಹೆಚ್ಚು ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರ ಜೊತೆಗೆ ಹೆಚ್ಚುವರಿ ಪ್ರಸ್ತಾವನೆಗಳು ಹಾಗೂ 23,000 ಕೋಟಿ ರೂ. ಮೊತ್ತದ ಒಪ್ಪಂದವೂ ಸೇರಿ ಒಟ್ಟು 1 ಲಕ್ಷ ಕೋಟಿ ರೂ. ಹೂಡಿಕೆ ಆಗಿದೆ ಎಂದು ವಿವರಿಸಿದರು.

ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಟ್ಟಿರುವ ಹಿನ್ನಲೆಯೇ ರಾಜ್ಯದ ಬಗ್ಗೆ ಹೂಡಿಕೆದಾರರು ಅಚಲ ವಿಶ್ವಾಸ ಇರಿಸಿದ್ದಾರೆ. ಹೂಡಿಕೆದಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭೂ, ಕಾರ್ಮಿಕ ಸೇರಿದಂತೆ ಹಲವು ಸುಧಾರಣೆಗಳನ್ನು ತರಲಾಗಿದೆ ಎಂದು ಹೇಳಿದರು

Share this Story:

Follow Webdunia kannada

ಮುಂದಿನ ಸುದ್ದಿ

39 ಕೋಟಿ ಮೈಲಿಗಲ್ಲು ದಾಟಿದ ಅಭಿಯಾನ!