Select Your Language

Notifications

webdunia
webdunia
webdunia
webdunia

ಕೋವಿಡ್‌ನ 2ನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ

ಕೋವಿಡ್‌ನ 2ನೇ ಬೂಸ್ಟರ್ ಡೋಸ್ ಅಗತ್ಯವಿಲ್ಲ
ನವದೆಹಲಿ , ಗುರುವಾರ, 5 ಜನವರಿ 2023 (11:05 IST)
ನವದೆಹಲಿ : ಕೋವಿಡ್-19 ಸೋಕಿನ ವಿರುದ್ಧ ಹೋರಾಡಲು 2ನೇ ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಮೊದಲು ನಾವು ದೇಶದಲ್ಲಿ ಕೋವಿಡ್ನ ಮೊದಲನೇ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಿದೆ. ಸದ್ಯ ಮೊದಲನೇ ಬೂಸ್ಟರ್ ಡೋಸ್ ತೆಗೆದುಕೊಂಡಿರುವವರು 2ನೇ ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಒಟ್ಟು 220.11 ಕೋಟಿ ಲಸಿಕೆಗಳನ್ನು ನೀಡಲಾಗಿದ್ದು, ಅದರಲ್ಲಿ 95.13 ಕೋಟಿ ಜನರು 2ನೇ ಡೋಸ್ ತೆಗೆದುಕೊಂಡಿದ್ದಾರೆ. ಇಲ್ಲಿಯವರೆಗೆ 22.41 ಕೋಟಿ ಜನರು ಮಾತ್ರವೇ ಬೂಸ್ಟರ್ ಡೋಸ್ ತೆಗೆದುಕೊಂಡಿದ್ದಾರೆ. 

ಕೋವಿಡ್ನ ಹೊಸ ರೂಪಾಂತರಗಳಿಂದಾಗಿ ಪ್ರಪಂಚದಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಂಗಳವಾರ ಭಾರತದಲ್ಲಿ 134 ಹೊಸ ಕೋವಿಡ್ ಕೇಸ್ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ವಜನಿಕ ಸಭೆಗೆ ಆಂಧ್ರ ಸರ್ಕಾರ ನಿಷೇಧ