Publish Date: Tue, 27 Dec 2022 (10:44 IST)
Updated Date: Tue, 27 Dec 2022 (11:17 IST)
ನವದೆಹಲಿ : ನೆರೆಯ ರಾಷ್ಟ್ರ ಚೀನಾದಲ್ಲಿ ಕೋವಿಡ್-19 ಪ್ರಕರಣಗಳು ಹಠಾತ್ತನೆ ಏರಿಕೆ ಕಾಣುತ್ತಿರುವುದರಿಂದ ಭಾರತದಲ್ಲಿ ಮತ್ತೊಂದು ಅಲೆಯ ಭೀತಿಯನ್ನು ಹುಟ್ಟುಹಾಕಿದೆ.
ಇದೀಗ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ಮಾರ್ಗಸೂಚಿಗಳು ಹಾಗೂ ಸಲಹೆಗಳನ್ನು ನೀಡುವ ಮೂಲಕ ಸೋಂಕು ಹರಡುವಿಕೆ ವಿರುದ್ಧ ಹೋರಾಡಲು ಸಜ್ಜಾಗಿದೆ.
ಭಾರತದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತೀಯ ವೈದ್ಯಕೀಯ ಸಂಘದ ವೈದ್ಯರು ಹಾಗೂ ಆರೋಗ್ಯ ತಜ್ಞರೊಂದಿಗೆ ಸಭೆ ನಡೆಸಿದ್ದಾರೆ.