Webdunia - Bharat's app for daily news and videos

Install App

33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಹೈಕೋರ್ಟ್ ಅಸ್ತು

Webdunia
ಮಂಗಳವಾರ, 6 ಡಿಸೆಂಬರ್ 2022 (13:55 IST)
ನವದೆಹಲಿ : 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಎಂ. ಸಿಂಗ್, ತಾಯಿಯ ಆಯ್ಕೆಯೇ ಅಂತಿಮವಾಗಿದ್ದು, ಅದರ ಆಧಾರದ ಮೇಲೆ ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
 
33 ವಾರಗಳ ಗರ್ಭಿಣಿಯಾಗಿರುವ 26 ವರ್ಷದ ಮಹಿಳೆಯೊಬ್ಬರು ತಮ್ಮ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಸಿಂಗ್, ಎನ್ಎನ್ಜೆಪಿ ಆಸ್ಪತ್ರೆ ವೈದ್ಯರ ಸಲಹೆ ಕೇಳಿದ್ದರು. ಆದರೆ ವರದಿಯಲ್ಲಿ ವೈದ್ಯರು ಗರ್ಭಪಾತವನ್ನು ತಿರಸ್ಕರಿಸಿದ್ದರು. 

ಬಳಿಕ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಮತ್ತು ಸ್ತ್ರೀರೋಗತಜ್ಞರಿಂದ ವರದಿ ಕೇಳಿದರು. ನರಶಸ್ತ್ರಚಿಕಿತ್ಸಕರು ಮಗುವಿಗೆ ಏನಾದರೂ ನ್ಯೂನತೆ ಇರುವ ಸಾಧ್ಯತೆಯಿದೆ,

ಮಗುವಿನ `ಜೀವನದ ಗುಣಮಟ್ಟ’ವನ್ನು ಊಹಿಸಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದರು. ಆದರೆ ಮಗುವಿನ ಜನನದ ಬಳಿಕ ಸುಮಾರು 10 ವಾರಗಳ ನಂತರ ಕೆಲವು ಸಮಸ್ಯೆಗಳಿಗೆ ಶಸ್ತ್ರಚಿಕಿತ್ಸೆ ನಡೆಸಬಹುದು ಎಂದು ತಿಳಿಸಿದ್ದರು.

ವರದಿ ಆಧರಿಸಿ ತೀರ್ಪು ನೀಡಿದ ನ್ಯಾ. ಪ್ರತಿಭಾ ಸಿಂಗ್, ಭಾರತದ ಕಾನೂನಿನಲ್ಲಿ ಮಹಿಳೆ ತಾನು ಗರ್ಭಾವಸ್ಥೆಯಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದು ಅಂತಿಮವಾಗಿ ಅವರೇ ನಿರ್ಧರಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments