Select Your Language

Notifications

webdunia
webdunia
webdunia
webdunia

ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ

ಮಹಿಳಾ ನೌಕರರಿಗೆ 60 ದಿನ ವಿಶೇಷ ರಜೆ
ನವದೆಹಲಿ , ಸೋಮವಾರ, 5 ಸೆಪ್ಟಂಬರ್ 2022 (14:41 IST)
ನವದೆಹಲಿ : ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ನಂತರ ಮಗು ಮರಣ ಹೊಂದಿದರೆ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ಕಾಲ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ)  ಆದೇಶ ಹೊರಡಿಸಿದೆ.

ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ರಜೆ ಮಾತೃತ್ವ ರಜೆ ಮಂಜೂರು ಮಾಡುವ ಕುರಿತಾಗಿ ಹಲವು ಪ್ರಶ್ನೆಗಳು ಸಿಬ್ಬಂದಿಗಳಿಂದ ಬಂದಿತ್ತು.

ಹಾಗಾಗಿ ಸರ್ಕಾರಿ ಮಹಿಳಾ ನೌಕರಿಗೆ ಅನ್ವಯವಾಗುವಂತೆ ಮಗುವಿನ ಮರಣದ ಕಾರಣದಿಂದ ಉಂಟಾಗುವ ಸಂಭಾವ್ಯ ಭಾವನಾತ್ಮಕ ಆಘಾತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಡಿಒಪಿಟಿ ಆದೇಶದಲ್ಲಿ ತಿಳಿಸಿದೆ. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ವಿಶೇಷ ಹೆರಿಗೆ ರಜೆಯ ಪ್ರಯೋಜನವು ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳಾ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ದೊರಕುತ್ತದೆ. ಇದಲ್ಲದೆ ಅಧಿಕೃತ ಆಸ್ಪತ್ರೆಯಲ್ಲಿ ಮಗುವಿನ ಹೆರಿಗೆಗೆ ಮಾತ್ರ ರಜೆ ಸ್ವೀಕಾರಾರ್ಹವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆಯಲ್ಲಿ ಸಾಕಿದ ಹಸು ಸಾವು ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು..!!! ಹೃದಯ ಹಿಂಡುವ ಘಟನೆ