Select Your Language

Notifications

webdunia
webdunia
webdunia
webdunia

ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ ?

ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ ?
ಮೈಸೂರು , ಭಾನುವಾರ, 19 ಜೂನ್ 2022 (09:23 IST)
ಮೈಸೂರು : 8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು,
 
ಮೋದಿಯವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಗಳ ಪಟ್ಟಿಯನ್ನು ಈ ಹಿಂದೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಜೂನ್ 20 ಮತ್ತು 21ರಂದು ಎರಡು ದಿನ ಮೋದಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ. 20ರಂದು ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಆಗಮಿಸಿ ನಂತರ ಮಧ್ಯಾಹ್ನ 12:30ಕ್ಕೆ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿ ಸಂಜೆ 6 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಲಿದ್ದಾರೆ.

ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸಂಜೆ 7:30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂಟರ್ ನೆಟ್ ಎಕ್ಸ್ ಪ್ಲೋರರ್ ಗೆ ಸಾವಿರಾರು ರೂ. ಕೊಟ್ಟು ಸಮಾಧಿ ಕಟ್ಟಿದ!