Webdunia - Bharat's app for daily news and videos

Install App

ಮಕ್ಕಳನ್ನು ಬಿಡದ ಹೊಸ ತಳಿ !

Webdunia
ಶನಿವಾರ, 11 ಡಿಸೆಂಬರ್ 2021 (07:47 IST)
ನವದೆಹಲಿ : ವಯಸ್ಕರನ್ನು ಕಾಡುತ್ತಿದ್ದ ಓಮಿಕ್ರಾನ್ ಈಗ ಮಕ್ಕಳಿಗೂ ವಕ್ಕರಿಸಿದೆ.

ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.
ಇದರಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 3 ವರ್ಷದ ಮಗು ಸೇರಿದಂತೆ 7 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಇದರಿಂದ ದೇಶದಲ್ಲಿ ಓಮಿಕ್ರಾನ್ ಸೋಂಕು ಒಟ್ಟು ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 

ಪುಣೆಯ ನಾಲ್ವರು ಓಮಿಕ್ರಾನ್ ಸೋಂಕಿತರು ನೈಜೀರಿಯಾ ಮಹಿಳೆಯ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಅವರಲ್ಲೂ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರಲ್ಲಿ ನಾಲ್ವರು ಕೋವಿಡ್ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದುಕೊಂಡಿದ್ದರು. ಇನ್ನು ಮೂವರು ಒಂದು ಡೋಸ್ ಮಾತ್ರ ಪಡೆದಿದ್ದರು. 

ವಿಶ್ವದಲ್ಲಿ ನವೆಂಬರ್ 24ರ ಸಂದರ್ಭದಲ್ಲಿ ಕೇವಲ ಎರಡು ದೇಶಗಳಲ್ಲಿ ಮಾತ್ರ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು. ಈಗ ಆ ಸಂಖ್ಯೆ 59 ದೇಶಗಳಿಗೆ ವಿಸ್ತರಿಸಿದೆ. ಇಷ್ಟೂ ದೇಶಗಳಲ್ಲಿ ಈವರೆಗೆ ಓಮಿಕ್ರಾನ್ ಸೋಂಕಿತ ಒಟ್ಟು 2,936 ಪ್ರಕರಣಗಳು ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments