Select Your Language

Notifications

webdunia
webdunia
webdunia
webdunia

ವೇಗವಾಗಿ ಹರಡುವ ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ!

ವೇಗವಾಗಿ ಹರಡುವ ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ!
ನವದೆಹಲಿ , ಗುರುವಾರ, 22 ಡಿಸೆಂಬರ್ 2022 (10:43 IST)
ನವದೆಹಲಿ : ಚೀನಾದ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಓಮಿಕ್ರಾನ್ನ ಉಪತಳಿ ಬಿಎಫ್.7 ಸೋಂಕಿನ 4 ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ.

ಭಾರತದಲ್ಲಿ ಒಟ್ಟು ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಗುಜರಾತ್ ಹಾಗೂ ಒಡಿಶಾ ರಾಜ್ಯಗಳಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಬಿಎಫ್.7 ಸೋಂಕಿನ ಮೊದಲ ಪ್ರಕರಣ ಅಕ್ಟೋಬರ್ನಲ್ಲಿ ಗುಜರಾತ್ನಲ್ಲಿ ಪತ್ತೆಯಾಯಿತು.

ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣವನ್ನು ಪತ್ತೆ ಮಾಡಿತು. 2ನೇ ಪ್ರಕರಣವೂ ಗುಜರಾತ್ನಲ್ಲಿ ಪತ್ತೆಯಾಗಿದ್ದರೆ, ಉಳಿದೆರಡು ಪ್ರಕರಣಗಳು ಒಡಿಶಾದಲ್ಲಿ ವರದಿಯಾಗಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಶತಾಬ್ದಿ ಸೂಪರ್‌ಫಾಸ್ಟ್ ರೈಲುಗಳ ವೇಳಾಪಟ್ಟಿ ಬದಲಾವಣೆ