Select Your Language

Notifications

webdunia
webdunia
webdunia
webdunia

ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ!

ಕೋವಿಡ್ ಹೊಸ ತಳಿ ಭಾರತದಲ್ಲಿ ಪತ್ತೆ!
ನವದೆಹಲಿ , ಶುಕ್ರವಾರ, 23 ಡಿಸೆಂಬರ್ 2022 (09:16 IST)
ಚೀನಾದ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಓಮಿಕ್ರಾನ್ನ ಉಪತಳಿ ಬಿಎಫ್.7 ಸೋಂಕಿನ 4 ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ.

ಭಾರತದಲ್ಲಿ ಒಟ್ಟು ನಾಲ್ಕು ಪ್ರಕರಣಗಳು ವರದಿಯಾಗಿದ್ದು, ಗುಜರಾತ್ ಹಾಗೂ ಒಡಿಶಾ ರಾಜ್ಯಗಳಲ್ಲಿ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಬಿಎಫ್.7 ಸೋಂಕಿನ ಮೊದಲ ಪ್ರಕರಣ ಅಕ್ಟೋಬರ್ನಲ್ಲಿ ಗುಜರಾತ್ನಲ್ಲಿ ಪತ್ತೆಯಾಯಿತು.

ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣವನ್ನು ಪತ್ತೆ ಮಾಡಿತು. 2ನೇ ಪ್ರಕರಣವೂ ಗುಜರಾತ್ನಲ್ಲಿ ಪತ್ತೆಯಾಗಿದ್ದರೆ, ಉಳಿದೆರಡು ಪ್ರಕರಣಗಳು ಒಡಿಶಾದಲ್ಲಿ ವರದಿಯಾಗಿವೆ.

ನ್ಯೂ ಇಯರ್ಗೆ ನಿರ್ಬಂಧ?

ನ್ಯೂ ಇಯರ್ ಸಮೀಪಿಸುತ್ತಿರುವ ಹೊತ್ತಲ್ಲೇ ಕೊರೊನಾ ವೈರಸ್ ಭೀತಿ ಮತ್ತೆ ಶುರುವಾಗಿದೆ. ಇದರಿಂದ ನ್ಯೂ ಇಯರ್ ಸಂದರ್ಭದಲ್ಲಿ ಹಲವು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ. ಈಗಾಗಲೇ ಮಾಸ್ಕ್ ಕಡ್ಡಾಯಕ್ಕೆ ಆದೇಶ ಹೊರಡಿಸುವ ಸಂಬಂಧ ಸುಳಿವು ಸಿಕ್ಕಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಹೇಗಿದೆ ಕೊರೊನಾ ಪರಿಸ್ಥಿತಿ?