ಬೆಳ್ಳಂಬೆಳಗ್ಗೆ ಎಸಿಬಿ ಶಾಕ್!

Webdunia
ಶುಕ್ರವಾರ, 17 ಜೂನ್ 2022 (09:10 IST)
ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಜೆಪಿ ನಗರದ ಶಿವಲಿಂಗಯ್ಯ ಅವರಿಗೆ ಸೇರಿದ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಲಿಂಗಯ್ಯ ಬಿಡಿಎನ ಗಾರ್ಡೇನೇಯರ್ ಆಗಿದ್ದಾರೆ. ಅಷ್ಟೇ ಅಲ್ಲದೇ ಬಸವನಗುಡಿ, ಕನಕಪುರ ರೋಡ್, ಹಾಗೂ ದೊಡ್ಡಕಲ್ಲಸಂದ್ರದ ಮನೆಗಳ ಮೇಲೆ ದಾಳಿ ನಡೆದಿದೆ. ಕೇವಲ ಬೆಂಗಳೂರೊಂದೇ ಅಲ್ಲದೇ ರಾಜ್ಯದ ನಾನಾ ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಜನಾರ್ದನ್ ಹಾಗೂ ಅವರ ಆಪ್ತರ ಮನೆ ಮೇಲೂ ದಾಳಿ ನಡೆದಿದ್ದು, ಇದೀಗ ಜನಾರ್ದನ್ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ವಿಭಾಗದ ರಿಜಿಸ್ಟರ್ ಆಗಿ ನಿವೃತ್ತಿ ಹೊಂದಿದ್ದರು. ಸದ್ಯ ಚಂದ್ರಲೇಔಟ್ನಲ್ಲಿ ವಾಸಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ರಾಜೀವ್ ಗೌಡ ದಮ್ಕಿ ಪ್ರಕರಣ: ಬಿಜೆ‍ಪಿಯಿಂದ ನಾವು ಸಂಸ್ಕೃತಿ ಕಲಿಯಬೇಕಾ

ಸಂಕ್ರಾಂತಿ ಹಬ್ಬದ ದಿನವೇ ಕುಮಾರಸ್ವಾಮಿ ಮಹತ್ವದ ಘೋಷಣೆ: ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments