Webdunia - Bharat's app for daily news and videos

Install App

ಪ್ರಧಾನಿಗೆ ನಟ ಅನಿರುದ್ಧ್ ಪತ್ರ : ಪತ್ರದಲ್ಲೇನಿದೆ?

Webdunia
ಮಂಗಳವಾರ, 24 ಮೇ 2022 (08:42 IST)
ಬೆಂಗಳೂರು : ಬ್ರ್ಯಾಂಡ್ ಬೆಂಗಳೂರಿನ ಹೆಸರನ್ನು ಉಳಿಸಿ ಎಂದು ಸ್ಯಾಂಡಲ್ವುಡ್ ನಟ ಅನಿರುದ್ಧ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
 
ಐಟಿ ಹಬ್, ಗ್ರೀನ್ ಸಿಟಿ ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು. ಇಲ್ಲಿನ ಜನಪ್ರತಿನಿಧಿಗಳು ಇಚ್ಛಾ ಶಕ್ತಿ ಪ್ರದರ್ಶಿಸಿದರೆ ಸ್ವಚ್ಛ ನಗರಿ ಬೆಂಗಳೂರು ಆಗಬಹುದು ಅಂತ ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ತಿಳಿಸಿದ್ದಾರೆ. 

ಕಳೆದ ವಾರವಷ್ಟೇ ಬ್ರ್ಯಾಂಡ್ ಬೆಂಗಳೂರು ಕಡೆ ಸರ್ಕಾರ ಗಮನಹರಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದರು. 

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳು ಘಟಿಸಿ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ.

ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ಥಾಪನೆ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments