Webdunia - Bharat's app for daily news and videos

Install App

ನಟ ಚೇತನ್ ಗಡಿಪಾರು!

Webdunia
ಬುಧವಾರ, 2 ಮಾರ್ಚ್ 2022 (10:45 IST)
ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ ಎಡಿಜಿಪಿ ಪ್ರತಾಪ್ ರೆಡ್ಡಿ ಮೂಲಕ ಗೃಹಮಂತ್ರಿ ಕಛೇರಿಯ ಮುಖ್ಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ.

ಸಮುದಾಯ ಒಂದರ ಅವಹೇಳನಕ್ಕೆ ಸಂಬಂಧಿಸಿದಂತೆ ಚೇತನ್ ಮೇಲೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸ್ ಇಲಾಖೆ, ಚೇತನ್ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ. ಹಾಗಾಗಿ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. 

ಮೂಲತಃ ಮೈಸೂರಿನವರಾದ ಚೇತನ್ ಕುಟುಂಬ ಅಮೆರಿಕಾದಲ್ಲಿ ವಾಸವಿದೆ. ಚೇತನ್ ಅಮೆರಿಕಾದಲ್ಲೇ ಹುಟ್ಟಿ ಬೆಳೆದಿದ್ದಾರೆ. ಅವರು ಅಲ್ಲಿನ ಪೌರತ್ವ ಪಡೆದಿದ್ದಾರೆ. ಹಾಗಾಗಿ ಅಮೆರಿಕಾಗೆ ಗಡಿಪಾರು ಮಾಡುವಂತೆ ಶಿಫಾರಸ್ಸಿನಲ್ಲಿ ತಿಳಿಸಲಾಗಿದೆಯಂತೆ. 

ತಮ್ಮನ್ನು ಗಡಿಪಾರು ಮಾಡುವಂತೆ ಶಿಫಾರಸ್ಸು ಮಾಡಿರುವ ವಿಷಯ ತಮಗೆ ಗೊತ್ತಿಲ್ಲ ಮತ್ತು ತಮ್ಮ ವಕೀಲರ ಗಮನಕ್ಕೂ ಬಂದಿಲ್ಲ ಎಂದಿದ್ದಾರೆ ಚೇತನ್. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಹೋರಾಟ ನಿರಂತರವಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಸತ್ಯ ನಿಕೇತನ ಕಟ್ಟಡ ಕುಸಿತ ಪ್ರಕರಣ: ಮಹೇಶ್ ಗುಪ್ತಾ, ಇತರ ಇಬ್ಬರಿಗೆ 2 ದಿನಗಳ ಪೊಲೀಸ್ ಕಸ್ಟಡಿ

ಭಾರತ ದೇಶ ಇವರ ಅಪ್ಪನ ಮನೆ ಆಸ್ತಿಯೇ: ಬಿಕೆ ಹರಿಪ್ರಸಾದ್ ಕಿಡಿ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿಸಿದ ಬಿಗಿಭದ್ರತೆ, ಹಗಲು, ರಾತ್ರಿ ನಿಗಾ, ಕಾರಣ ಏನ್‌ ಗೊತ್ತಾ

ಮುಂದಿನ ಸುದ್ದಿ
Show comments