Publish Date: Mon, 02 Jul 2018 (14:46 IST)
Updated Date: Mon, 02 Jul 2018 (14:49 IST)
ತುಮಕೂರು : ಲೋಕಸಭೆ ಚುನಾವಣೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬ ಸ್ಪೋಟಕ ಮಾಹಿತಿ ತಿಳಿದುಬಂದಿದೆ.
ಮಾಜಿ ಸಚಿವ ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಚೆನ್ನಿಗಪ್ಪ ಅವರು ಈ ಮಾಹಿತಿಯನ್ನು ತಿಳಿಸಿದ್ದು, ನಟ ನಿಖಿಲ್ ಕುಮಾರಸ್ವಾಮಿ ಅವರು ತುಮಕೂರು ಲೋಕಸಭೆಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಸೋಮವಾರ (ಇಂದು) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ನಿಖಿಲ್ ಗೌಡ ಸ್ಪರ್ಧೆಗೆ ಆಹ್ವಾನಿಸಿದ್ದೀವಿ. ಭವಾನಿ ರೇವಣ್ಣ ಬಂದ್ರು ಸಹ ನಮ್ಮ ಅಭ್ಯಂತರವಿಲ್ಲ, ಅಂತಿಮವಾಗಿ ಜಿಲ್ಲಾ ಲೋಕಸಭಾ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುವುದು ಎನ್ನುವುದನ್ನು ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ