Publish Date: Thu, 10 May 2018 (14:05 IST)
Updated Date: Thu, 10 May 2018 (14:07 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ವಿ ನಾಗರಾಜು ಅವರ ಪರವಾಗಿ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ನಟ ಯಶ್, ‘ನೆಲಮಂಗಲ ತಾಲೂಕಿನಲ್ಲಿರುವ 56 ಕೆರೆಗಳನ್ನು ಹೂಳೆತ್ತಿ ಅಭಿವೃದ್ಧಿ ಮಾಡಿ ಮತ್ತೆ ಕೆರೆಗಳನ್ನು ತುಂಬಿಸುತ್ತೇನೆ ಎಂಬ ಉತ್ಸಾಹದಲ್ಲಿ ಮಾಜಿ ಶಾಸಕ ನಾಗರಾಜು ಅವರಿದ್ದಾರೆ. ಹೀಗಾಗಿ ನಾನು ನಾಗರಾಜ್ ಪರ ಮತಯಾಚನೆ ಮಾಡಲು ಬಂದಿದ್ದೇನೆ. ಒಂದು ವೇಳೆ ನಾಗರಾಜ್ ಗೆದ್ದ ಮೇಲೆ ಕೆರೆಗಳನ್ನು ಅಭಿವೃದ್ಧಿ ಮಾಡದೇ ಇದ್ದರೆ, ನಾನೇ ಖುದ್ದು ಜನರ ಮಧ್ಯೆ ಕೂತು ಪ್ರತಿಭಟನೆ ಮಾಡುತ್ತೇನೆ’ ಎಂದು ಭರವಸೆ ನೀಡಿದ್ದಾರೆ.
ಹಾಗೇ ‘ಎಂಎಲ್‍ಎ, ಎಂಪಿ ಮಿನಿಸ್ಟರ್ ಆಗಬೇಕಾದರೆ ನಾನು ತಲೆಕೆಡಿಸಿಕೊಳ್ಳಬೇಕಿಲ್ಲ. ಕರ್ನಾಟಕ ಯಾವುದೇ ಕ್ಷೇತ್ರದಲ್ಲಿ ನಾನು ಸ್ಪರ್ಧೆ ಮಾಡಿದರೂ ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸುತ್ತಾರೆ. ಜನರು ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವಷ್ಟು ಅಭಿಮಾನ ಇಟ್ಟಿದ್ದಾರೆ. ಈ ಅಭಿಮಾನವೇ ಚುನಾವಣೆಯಲ್ಲಿ ಗೆಲ್ಲಿಸುತ್ತೆ’ ಎಂದು ಪರೋಕ್ಷವಾಗಿ ರಾಜಕೀಯಕ್ಕೆ ಬರುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ