Webdunia - Bharat's app for daily news and videos

Install App

"ಭಾರತ್ ನೆಟ್ಗೆ ಕರ್ನಾಟಕ ಸೇರ್ಪಡೆ ಮಾಡಿ': ಬೊಮ್ಮಾಯಿ ಕೇಂದ್ರ ಸರಕಾರಕ್ಕೆ ಮನವಿ

Webdunia
ಬುಧವಾರ, 8 ಸೆಪ್ಟಂಬರ್ 2021 (13:24 IST)
ಬೆಂಗಳೂರು : ಗ್ರಾಮೀಣ ಪ್ರದೇಶಕ್ಕೆ ಅಂತರ್ಜಾಲ ಸೌಲಭ್ಯ ಕಲ್ಪಿಸುವ ದೇಶದ ಮಹತ್ವದ ಭಾರತ್ ನೆಟ್ ಯೋಜನೆಗೆ ಕರ್ನಾಟಕ ರಾಜ್ಯವನ್ನು ಸೇರ್ಪಡೆ ಮಾಡುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದರು.

ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ರೈಲ್ವೇ ಮತ್ತು ದೂರಸಂಪರ್ಕ ಖಾತೆಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಅನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಈ ಭೇಟಿ ವೇಳೆ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ. ಕರ್ನಾಟಕ ರಾಜ್ಯ ಆಪ್ಟಿಕಲ್ ಫೈಬರ್ ನೆಟ್ವರ್ಕಿಂಗ್ ಬಹಳ ಸೀಮಿತವಾಗಿದ್ದು, ಭಾರತ್ ನೆಟ್ಗೆ ಕರ್ನಾಟಕವನ್ನು ಸೇರ್ಪಡೆ ಮಾಡಬೇಕು. 4,300 ಕೋ. ರೂ.ಗಳಲ್ಲಿ ರಾಜ್ಯದಲ್ಲಿ ಸಂಪೂರ್ಣ ನೆಟ್ ವರ್ಕಿಂಗ್ ಸಾಧ್ಯವಾಗು ತ್ತದೆ. ಇದರಿಂದ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಡಳಿತ, ವ್ಯಾಪಾರ ವಹಿವಾಟು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗ ಲಿದೆ ಎಂದು ಮನವಿ ಮಾಡಿದ್ದೇನೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅನುದಾನದ ಲಭ್ಯತೆ ಆಧಾರದಲ್ಲಿ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.
ರೈಲ್ವೇ ಯೋಜನೆಗಳಿಗೆ ಆದ್ಯತೆ :
ಕರ್ನಾಟಕದಲ್ಲಿ ರೈಲ್ವೇ ಅಭಿವೃದ್ಧಿ ಯೋಜನೆಗಳು, ಅದರಲ್ಲೂ ಪ್ರಮುಖವಾಗಿ ಈಗಾಗಲೇ ಪ್ರಾರಂಭ ಮಾಡಿರುವ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯ ಗತಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ವಿಶೇಷವಾಗಿ ಕಲಬುರಗಿಯಲ್ಲಿ ರೈಲ್ವೇ ಡಿವಿಜನ್ ಸ್ಥಾಪಿಸುವ ಬೇಡಿಕೆ ಇದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೇ ಮಾರ್ಗ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದೆ. ಪ್ರಕರಣ ಹೈಕೋರ್ಟಿನಲ್ಲಿದೆ. ಆದಷ್ಟು ಬೇಗ ಆ ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಬೊಮ್ಮಾಯಿ ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments