Select Your Language

Notifications

webdunia
webdunia
webdunia
Friday, 4 April 2025
webdunia

ಶ್ರೀ ಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಪೋಕ್ಸೊ
ಚಿತ್ರದುರ್ಗ , ಗುರುವಾರ, 8 ಸೆಪ್ಟಂಬರ್ 2022 (08:21 IST)
ಚಿತ್ರದುರ್ಗ : ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
 
ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಮುರುಘಾ ಶ್ರೀ ಜಾಮೀನಿಗೆ ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 3ನೇ ಆರೋಪಿ ಮಠದ ಉತ್ತರಾಧಿಕಾರಿ (ಬಸವಾದಿತ್ಯ), 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನೂ ಮುಂದೂಡಲಾಗಿದೆ. ನಾಳೆ ಆಕ್ಷೇಪಣೆ ಸಲ್ಲಿಕೆಗೆ ಕೋರ್ಟ್ ಸೂಚಿಸಿದೆ ಎಂದು ಸಂತ್ರಸ್ತೆಯರ ಪರ ವಕೀಲ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿವೆ : ಕೇಜ್ರಿವಾಲ್