ಮಂಗಳೂರಿನಲ್ಲಿ ಇಂದು ಮತ್ತೆ ಶುರುವಾಯ್ತು ಮಳೆ ಅಬ್ಬರ

Webdunia
ಬುಧವಾರ, 30 ಮೇ 2018 (10:12 IST)
ಮಂಗಳೂರು: ನಿನ್ನೆ ದಿನವಿಡೀ ಮಳೆ ಸುರಿದು ಮಂಗಳೂರಿನ ಬೀದಿಗಳನ್ನು ಕಡಲಾಗಿ ಮಾಡಿದ್ದ ವರುಣರಾಯ ಇಂದು ಮತ್ತೆ ಬೆಳಗ್ಗಿನಿಂದಲೇ ಸುರಿಯಲು ಶುರು ಮಾಡಿದ್ದಾನೆ.

ಬೆಳಗ್ಗಿನ ಜಾವ ಬಿಡುವು ತೋರಿದ್ದ ಮಳೆ, ಬೆಳಿಗ್ಗೆ ಮತ್ತೆ ಸುರಿಯಲು ಆರಂಭಿಸಿದೆ. ಇಂದೂ ಕೂಡಾ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಈ ಮೊದಲೇ ಮುನ್ಸೂಚನೆ ನೀಡಿತ್ತು.

ಮುನ್ನಚ್ಚರಿಕೆಯ ಕ್ರಮವಾಗಿ ಇಂದು ದಕ್ಷಿಣ ಕನ್ನಡದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎನ್ ಡಿಆರ್ ಎಫ್ ಸಿಬ್ಬಂದಿ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳೂ ಪರಿಹಾರ ಕಾರ್ಯದಲ್ಲಿ ತೊಡಗಿವೆ. ಇನ್ನು ಅಕ್ರಮವಾಗಿ ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ಮಹಾ ಮಳೆಗೆ ಮೃತರಾದವರ ಕುಟುಂಬಕ್ಕೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಲಾ 5 ಲಕ್ಷ ರೂ. ಘೋಷಣೆ ಮಾಡಿದ್ದಾರೆ. ನಿನ್ನೆ ಒಬ್ಬ ಮಹಿಳೆ ಮತ್ತು ಓರ್ವ ಬಾಲಕಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಮೊದಲು ನನ್ನ ಮತ್ತು ನಿಮ್ಮ ಅನುಭವದ ಬಗ್ಗೆ ಮಾತನಾಡೋಣ: ಎಚ್ ಡಿ ಕುಮಾರಸ್ವಾಮಿ ಡಿಚ್ಚಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments