Select Your Language

Notifications

webdunia
webdunia
webdunia
webdunia

ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ಕಡ್ಡಾಯ

ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ಕಡ್ಡಾಯ
ಬೆಂಗಳೂರು , ಭಾನುವಾರ, 7 ಮೇ 2023 (09:05 IST)
ಬೆಂಗಳೂರು : ಎಲ್ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಎಲ್ಕೆಜಿಗೆ ಸೇರಿಸಲು ಮಗುವಿಗೆ 4 ವರ್ಷ ತುಂಬಿರಬೇಕು.
 
2025 ಹಾಗೂ 26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಯ ದಾಖಲಾತಿಗೆ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯ ಎಂಬ ನಿಯಮ ಜಾರಿ ಮಾಡಲಾದ ಹಿನ್ನಲೆಯಲ್ಲಿ ಎಲ್ಕೆಜಿಗೆ ಈ ವಯಸ್ಸನ್ನು ನಿಗದಿ ಪಡಿಸಲಾಗಿದೆ. ಮುಂದಿನ ಸಾಲಿನಿಂದ ಒಂದನೇ ತರಗತಿಗೆ ದಾಖಲಾಗಲು 6 ವರ್ಷ ಕಡ್ಡಾಯ ಎಂದು ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ. 

ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮದ ಹಿನ್ನಲೆಯ ಪೂರ್ವ ತಯಾರಿಯಾಗಿ ಈ ವರ್ಷದಿಂದ ಎಲ್ಕೆಜಿ ದಾಖಲಾತಿಗೆ 4 ವರ್ಷ ನಿಗದಿ ಪಡಿಸಿ ಆದೇಶ ಹೊರಡಿಸಲಾಗಿದೆ. ಕಡ್ಡಾಯ ಶಿಕ್ಷಣ ನೀತಿ  2009 ಹಾಗೂ 2012ರ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಸಮಸ್ಯೆ ಇದ್ದಲ್ಲಿ ಕೆಳ ನ್ಯಾಯಾಲಯಕ್ಕೆ ಹೋಗಿ : ಸುಪ್ರೀಂ ಕೋರ್ಟ್