ರಾಜ್ಯದಲ್ಲಿ ಇಂದು,ನಾಳೆ ಹೆಚ್ಚಾಗಲಿದೆ ಅಲರ್ಟ್ ಘೋಷಣೆ?

Webdunia
ಮಂಗಳವಾರ, 5 ಅಕ್ಟೋಬರ್ 2021 (09:02 IST)
ಬೆಂಗಳೂರು(ಅ.05) : ರಾಜ್ಯದಲ್ಲಿ ಬಂಗಾಳಕೊಲ್ಲಿಯಲ್ಲಿಯ  ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವದಿಂದಾಗಿ ಕೊಂಚ ಬಿಡುವ ಪಡೆದಿದ್ದ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಮುಂಗಾರು ಕಡಿಮೆ ಒತ್ತಡದ ಪ್ರದೇಶದಿಂದ ಪೂರ್ವ ಜಾರ್ಖಂಡ್ನಾದ್ಯಂತ ಉತ್ತರ ಒರಿಸ್ಸಾದವರೆಗೆ ವಿಸ್ತರಿಸಿದ್ದು, ಅಕ್ಟೋಬರ್ 6 ರಿಂದ ಮುಂಗಾರು  ಕೊನೆಯಾಗಲು ಪರಿಸ್ಥಿತಿಗಳು ಅನುಕೂಲಕರವಾಗುತ್ತಿವೆ. ಆದರೆ ಇಂದು ಮತ್ತು ನಾಳೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 
ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದೆ. ಆದರೆ ಚಂಡಮಾರುತದ ಪ್ರಭಾವ ಇದ್ದು ಆ ಕಾರಣದಿಂದ  ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments