ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳ ನಿರ್ಮಾಣ ಮಾಡಲಾಗಿದೆ.
ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ನಿಯೋಜನೆ ಮಾಡಲಾಗಿದೆ. 2,930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ಮಾಡಲಾಗಿದೆ.
ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಬೇಕು. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ.
ನೇರ ರಾಜ್ಯಗಳ ಹಿರಿಯ ಪೊಲೀಸರೊಂದಿಗೆ ರಾಜ್ಯ ಪೊಲೀಸರು ಸಭೆ ನಡೆಸಲಿದ್ದು, ರಾಜ್ಯದ ಗಡಿಗಳಲ್ಲಿ ವಾಹನಗಳ ತಪಾಸಣೆ ಮಾಡಿ ಒಳ ಬಿಡಲು ಸೂಚನೆ ನೀಡಿದ್ದಾರೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಕೇರಳ ಅಧಿಕಾರಿಗಳ ಜೊತೆ ರಾಜ್ಯದ ಪೊಲೀಸರು ಚರ್ಚೆ ನಡೆಸಲಿದ್ದಾರೆ .
ಇದರೊಂದಿಗೆ ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಿದ್ದಾರೆ.