ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ರಾಜ್ಯದ ಮಹಿಳೆಯರಿಗೆ ಸರ್ಕಾರ ಗುಡ್ನ್ಯೂಸ್ ಕೊಡುವ ಸಾಧ್ಯತೆ ಇದೆ. ಗೃಹಜ್ಯೋತಿ ಯಶಸ್ವಿ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನ ಜಾರಿ ಮಾಡಲು ಸಕಲ ಸಿದ್ದತೆಗಳನ್ನ ಮಾಡಿಕೊಳ್ತಿದೆ.
ಗೃಹಲಕ್ಷ್ಮಿ ಯೋಜನೆ ನಾಳಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗಲಿದೆ. ಯೋಜನೆಗೆ ಅರ್ಜಿ ಪ್ರಕ್ರಿಯೆ, ಹೊಸ ಅಪ್ಲಿಕೇಷನ್ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತೆ. ಬಳಿಕ ಕ್ಯಾಬಿನೆಟ್ ಸಭೆಯಲ್ಲಿ ಗ್ರೀನ್ ಸಿಗ್ನಲ್ ಪಡೆದು ಅಧಿಕೃತವಾಗಿ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ.