Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಜತೆಗೆ ನಾಲ್ವರು ಸಚಿವರ ಪ್ರಮಾಣ ವಚನ

ಯಡಿಯೂರಪ್ಪ ಜತೆಗೆ ನಾಲ್ವರು ಸಚಿವರ ಪ್ರಮಾಣ ವಚನ
ಬೆಂಗಳೂರು , ಬುಧವಾರ, 16 ಮೇ 2018 (22:03 IST)
ಬೆಂಗಳೂರು: ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿಎಸ್ ಯಡಿಯೂರಪ್ಪ ಜತೆ ನಾಲ್ವರು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯಡಿಯೂರಪ್ಪ ಜತೆಗೆ ಕೆಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ಬಿ ಶ್ರೀರಾಮುಲು ಮತ್ತು ಆರ್ ಅಶೋಕ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ ಸಾಲ ಮನ್ನಾ ನಿರ್ಧಾರವನ್ನು ನಾಳೆಯೇ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಲಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಬಿಜೆಪಿ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳನ್ನು ನಾಳೆಯೇ ಯಡಿಯೂಪ್ಪ ಸಂಪುಟ ಸದಸ್ಯರೊಂದಿಗೆ ಘೋಷಣೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ರೇಕಿಂಗ್! ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ! ನಾಳೆ ಬೆಳಿಗ್ಗೆ ಬಿಎಸ್ ವೈ ಪ್ರಮಾಣವಚನ!