Publish Date: Wed, 27 Jul 2022 (08:00 IST)
Updated Date: Wed, 27 Jul 2022 (09:01 IST)
ಶ್ರೀನಗರ : ಕಾಶ್ಮೀರ ಕಣಿವೆ ಪ್ರದೇಶದ ಸುತ್ತಮುತ್ತ ಭಾರೀ ಮಳೆ ಆಗುತ್ತಿದೆ.
ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ಪಂಚತಾರ್ಣಿ ಮತ್ತು ಅಮರನಾಥ ಗುಹೆಯ ನಡುವೆ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಹವಾಮಾನ ಸುಧಾರಿಸಿದ ನಂತರ ಯಾತ್ರೆಯನ್ನು ಪುನರಾರಂಭಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗುಹಾಂತರ ದೇಗುಲದ ಸುತ್ತಲಿನ ಪರ್ವತಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಇದರಿಂದಾಗಿ ಸಮೀಪದ ನದಿಯಲ್ಲಿ ನೀರಿನ ಮಟ್ಟವೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಅಮರನಾಥ ಗುಹೆ ಸುತ್ತ ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.