Webdunia - Bharat's app for daily news and videos

Install App

ಭದ್ರತಾ ನೆರವು ಘೋಷಿಸಿದ ಅಮೆರಿಕ

Webdunia
ಭಾನುವಾರ, 27 ಫೆಬ್ರವರಿ 2022 (07:42 IST)
ವಾಷಿಂಗ್ಟನ್ : ರಷ್ಯಾ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಉಕ್ರೇನ್ಗೆ ಭದ್ರತಾ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ.

ಉಕ್ರೇನ್ಗೆ ತುರ್ತು ರಕ್ಷಣಾ ನೆರವಾಗಿ 4,503 ಕೋಟಿ ರೂ. (600 ಮಿಲಿಯನ್ ಡಾಲರ್) ನೀಡುವುದಾಗಿ ಶನಿವಾರ ಜೋ ಬೈಡೆನ್ ತಿಳಿಸಿದ್ದಾರೆ.

1961ರ ವಿದೇಶಿ ನೆರವು ಕಾಯಿದೆಯಡಿ ರಕ್ಷಣಾ ಇಲಾಖೆಯ ಸೇವೆಗಳು, ಉಪಕರಣ ಖರೀದಿ, ಮಿಲಿಟರಿ ಶಿಕ್ಷಣ ಮತ್ತು ತರಬೇತಿಗಾಗಿ 2,626 ಕೋಟಿ ರೂ. ಹಾಗೂ ಒಟ್ಟು ನೆರವಿಗಾಗಿ 1,876 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ಗೆ ಸೂಚಿಸಿದ್ದಾರೆ. 

ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ರಷ್ಯಾ ಸೇನೆ ಮತ್ತು ಕ್ಷಿಪಣಿಗಳು ಉಕ್ರೇನ್ ಮೇಲೆ ದಾಳಿ ನಡೆಸಿತು. ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಯೂರೋಪ್ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.

ಉಕ್ರೇನ್ ಮೇಲೆ ಸತತ ಮೂರನೇ ದಿನವೂ ರಷ್ಯಾ ದಾಳಿ ಮುಂದುವರಿಸಿದೆ. ಉಕ್ರೇನ್ನಲ್ಲಿ ಈವರೆಗೆ 198 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ರಷ್ಯಾ ಸೇನಾ ಪಡೆ ಉಕ್ರೇನ್ ರಾಜಧಾನಿ ಕೀವ್ ಪ್ರವೇಶಿಸಿದ್ದು, ಬೃಹತ್ ಕಟ್ಟಡಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments