Select Your Language

Notifications

webdunia
webdunia
webdunia
webdunia

ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ?

ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಮತ ಸ್ಫೋಟ?
ಬೆಂಗಳೂರು , ಭಾನುವಾರ, 19 ಮಾರ್ಚ್ 2023 (08:42 IST)
ಬೆಂಗಳೂರು : ಸಾರಿಗೆ ನಿಗಮಗಳ ನೌಕರರ ಮುಷ್ಕರ ವಿಚಾರದಲ್ಲಿ ಸಾರಿಗೆ ನೌಕರರ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಇದರಿಂದ ಯುಗಾದಿ ಹಬ್ಬಕ್ಕೂ ಮುನ್ನಾ ದಿನವೇ ಅಂದರೆ ಮಾ.21ಕ್ಕೆ 8 ಟ್ರೇಡ್ ಯೂನಿಯನ್ಗಳು ಕರೆ ಕೊಟ್ಟಿದ್ದ ಮುಷ್ಕರ ವಾಪಸ್ ಪಡೆಯಲಾಗಿದೆ.
 
ಮಾರ್ಚ್ 21 ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರ ವಾಪಸ್ ಪಡೆದುಕೊಂಡಿದ್ದು, ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ವಿರೋಧ ವ್ಯಕ್ತಪಡಿಸಿದೆ.

ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಕೆಎಸ್ಆರ್ಸಿಟಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಸ್ಪಷ್ಟನೆ ನೀಡಿದೆ. ಆದರೆ ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಚಂದ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾ.24ರಂದು ಮುಷ್ಕರ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶಿ ನಿಧಿ : ಕರ್ನಾಟಕಕ್ಕೆ 2ನೇ ಸ್ಥಾನ