Select Your Language

Notifications

webdunia
webdunia
webdunia
webdunia

ವರುಣನ ಆರ್ಭಟಕ್ಕೆ ಆಂಧ್ರ, ತಮಿಳುನಾಡು ತತ್ತರ!

ವರುಣನ ಆರ್ಭಟಕ್ಕೆ ಆಂಧ್ರ, ತಮಿಳುನಾಡು ತತ್ತರ!
ಬೆಂಗಳೂರು , ಭಾನುವಾರ, 28 ನವೆಂಬರ್ 2021 (07:09 IST)
ಬೆಂಗಳೂರು : ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರದವರೆಗೂ ಮಳೆ ಜೋರಾಗಿರಲಿದೆ.
ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ.
ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ. ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು