ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ ಜಾರಿ

Webdunia
ಶನಿವಾರ, 1 ಜುಲೈ 2023 (09:53 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಅಂತೆಯೇ ಇಂದಿನಿಂದ (ಜು.1) ಅನ್ನಭಾಗ್ಯ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ದೊರೆಯಲಿದೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ. 

ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂಪಾಯಿ ಸಿಗಲಿದೆ. ಬಿಪಿಎಲ್ ಕಾರ್ಡ್ದಾರರ ಅಕೌಂಟ್ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಇಂದಿನಿಂದ ಈ ಯೋಜನೆಯೂ ಆರಂಭವಾಗಲಿದೆ. ಈ ಯೋಜನೆ ಸೌಲಭ್ಯಕ್ಕಾಗಿ ಇಲ್ಲಿವರೆಗೆ ಒಟ್ಟು 86 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ 1.15 ಕೋಟಿಗೂ ಅಧಿಕ ಜನರು ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments