Select Your Language

Notifications

webdunia
webdunia
webdunia
webdunia

ಸೂರ್ಯನತ್ತ ಮತ್ತೊಂದು ಹೆಜ್ಜೆ : ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ

ಸೂರ್ಯನತ್ತ ಮತ್ತೊಂದು ಹೆಜ್ಜೆ : ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ
ನವದೆಹಲಿ , ಸೋಮವಾರ, 4 ಸೆಪ್ಟಂಬರ್ 2023 (10:42 IST)
ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಆದಿತ್ಯ ಎಲ್1 ಯೋಜನೆಯಲ್ಲಿ ನೌಕೆಯನ್ನು ಭೂಮಿ ಸುತ್ತಲಿನ ಮೊದಲನೇ ಕಕ್ಷೆಗೆ ಸೇರಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ.

ಬಾಹ್ಯಕಾಶದಲ್ಲಿ ನೌಕೆಯು ಸಾಮಾನ್ಯ ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. 245 ಕಿಮೀ x 22459 ಕಿಮೀ ವ್ಯಾಪ್ತಿಯ ಹೊಸ ಕಕ್ಷೆಗೆ ನೌಕೆ ತಲುಪಿದೆ. ಸೆಪ್ಟೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಮತ್ತೊಂದು ಹಂತದಲ್ಲಿ ಫೈರಿಂಗ್ ನಡೆಸಲಾಗುವುದು ಎಂದು ಇಸ್ರೋ ಟ್ವೀಟ್ ಮಾಡಿ ತಿಳಿಸಿದೆ.

ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನಕ್ಕಾಗಿ ‘ಆದಿತ್ಯ ಎಲ್1’ ಬಾಹ್ಯಾಕಾಶ ನೌಕೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಸೆ.2 ರಂದು ಉಡಾವಣೆ ಮಾಡಿತು.

ಭಾರತದ ಮೊದಲ ಸೌರ ವೀಕ್ಷಣಾಲಯವನ್ನು ಸೂರ್ಯ ಮತ್ತು ಭೂಮಿ ನಡುವಿನ ಐ1 ಪಾಯಿಂಟ್ನಲ್ಲಿ ಇರಿಸುವ ಮೂಲಕ ಸೂರ್ಯನ ಹೊರಗಿನ ವಾತಾವರಣ ಅಧ್ಯಯನ ಮಾಡುವ ಗುರಿಯನ್ನು ಈ ಮಿಷನ್ ಹೊಂದಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಭಾರತದಲ್ಲಿ ಸ್ಥಾನವಿಲ್ಲ: ನರೇಂದ್ರ ಮೋದಿ