Select Your Language

Notifications

webdunia
webdunia
webdunia
webdunia

ಹೈಕೋರ್ಟ್​​ನಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ಹೈಕೋರ್ಟ್​​ನಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ
ನವದೆಹಲಿ , ಶುಕ್ರವಾರ, 23 ಜೂನ್ 2023 (15:38 IST)
ಕರ್ನಾಟಕ ಹೈಕೋರ್ಟ್ನಲ್ಲಿನ ಖಾಲಿ ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಕೇಬಲ್ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು. ಆಯ್ಕೆಯಾದರೆ ಸಿಗುವ ವೇತನ ಎಷ್ಟು? ಈ  ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

 
•             ಸಂಸ್ಥೆಯ ಹೆಸರು : ಕರ್ನಾಟಕ ಹೈಕೋರ್ಟ್
•             ಹುದ್ದೆಗಳ ಸಂಖ್ಯೆ: 1
•             ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
•             ಹುದ್ದೆಯ ಹೆಸರು: ಕೇಬಲ್ ಆಪರೇಟರ್

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಐಟಿ ಅಥವಾ ಎಸ್ಎಸ್ಎಲ್ಸಿಯಲ್ಲಿ ಪಾಸ್ ಆಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
•             ಕ್ಯಾಟ್- IIA/IIB/IIIA & IIIB ಅಭ್ಯರ್ಥಿಗಳಿಗೆ: 03 ವರ್ಷಗಳು
•             SC/ST/Cat-I/PwBD ಅಭ್ಯರ್ಥಿಗಳಿಗೆ: 05 ವರ್ಷಗಳು

ಅರ್ಜಿ ಶುಲ್ಕ:

•             SC/ST/Cat-I/PwBD ಅಭ್ಯರ್ಥಿಗಳಿಗೆ: ರೂ.100/-
•             ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ.200/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.19900 ರಿಂದ 63200/- ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

•             ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-07-2023
•             ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್: karnatakajudiciary.kar.nic.in

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಸದಾನಂದಗೌಡ