Publish Date: Thu, 13 Sep 2018 (07:03 IST)
Updated Date: Thu, 13 Sep 2018 (07:09 IST)
ಲಂಡನ್ : ದೇಶದ ಬ್ಯಾಂಕ್ ಗಳಿಂದ ಸಾಲಪಡೆದು ಮರುಪಾವತಿಸದೆ ವಂಚನೆ ಮಾಡಿ ದೇಶ ಬಿಟ್ಟು ಪರಾರಿಯಾದ ಮದ್ಯದ ದೊರೆ ವಿಜಯ್ ಮಲ್ಯ ಈಗ ಸ್ಪೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ.
ಭಾರತಕ್ಕೆ ಮಲ್ಯರನ್ನು ಹಸ್ತಾಂತರ ಮಾಡುವ ಕುರಿತು ಲಂಡನ್ ನ್ಯಾಯಾಲಯದಲ್ಲಿ ನಡೆದ ಪ್ರಕರಣದ ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯ್ ಮಲ್ಯ, ತಾನು ಭಾರತವನ್ನು ತೊರೆಯುವ ಮುನ್ನ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಬ್ಯಾಂಕ್‍ಗಳಿಗೆ ನೀಡಬೇಕಿದ್ದ ಹಣ ಮರುಪಾವತಿ ಬಗ್ಗೆ ಮಾತುಕತೆ ನಡೆಸಿದ್ದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯ್ ಮಲ್ಯರ ಹೇಳಿಕೆ ಹೊರ ಬೀಳುತ್ತಿದಂತೆ ರಾಷ್ಟ್ರ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಕೇಂದ್ರ ಸರ್ಕಾರದ ವಿರುದ್ದ ಜನತೆ ಹಾಗೂ ಪ್ರತಿ ಪಕ್ಷಗಳು ಹರಿಹಾಯುತ್ತಿದ್ದಾವೆ.ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಮಲ್ಯ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. 2014ರ ವರೆಗೂ ವಿಜಯ್ ಮಲ್ಯರಿಗೆ ನನ್ನ ಭೇಟಿಗೆ ಅವಕಾಶವನ್ನೇ ನೀಡಿಲ್ಲ ಎಂದಾದರೇ ಭೇಟಿ ಮಾಡಿದ್ದಾರೆ ಎಂಬ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.