Publish Date: Sat, 04 Aug 2018 (09:19 IST)
Updated Date: Sat, 04 Aug 2018 (09:20 IST)
ನವದೆಹಲಿ: ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತೆ ಫೀಲ್ಡಿಗೆ ಇಳಿಯಲಿದ್ದಾರೆ.
ಈ ತಿಂಗಳು ಮತ್ತೆ ಅರುಣ್ ಜೇಟ್ಲಿ ಅಧಿಕೃತವಾಗಿ ತಮ್ಮ ಇಲಾಖೆಯ ಜವಾಬ್ಧಾರಿ ಮರಳಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದುವರೆಗೆ ಜೇಟ್ಲಿ ಅನುಪಸ್ಥಿತಿಯಲ್ಲಿ ಪಿಯೂಷ್ ಗೋಯಲ್ ಹಣಕಾಸು ಸಚಿವಾಲಯದ ಜವಾಬ್ಧಾರಿ ವಹಿಸಿಕೊಂಡಿದ್ದರು.
ಇದೀಗ ಚೇತರಿಸಿಕೊಂಡಿರುವ ಅರುಣ್ ಜೇಟ್ಲಿ ಸೆಕೆಂಡ್ ಇನಿಂಗ್ಸ್ ಶುರು ಮಾಡಲಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿಯಲ್ಲಿದ್ದ ಜೇಟ್ಲಿ ಈ ಬಾರಿ ಮುಂಗಾರು ಅಧಿವೇಶನದಲ್ಲೂ ಪಾಲ್ಗೊಂಡಿರಲಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.