Select Your Language

Notifications

webdunia
webdunia
webdunia
webdunia

ಚಾಮುಂಡಿಬೆಟ್ಟದಲ್ಲಿ ಆಷಾಢದ ವಿಶೇಷ : 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನ

ಚಾಮುಂಡಿಬೆಟ್ಟದಲ್ಲಿ ಆಷಾಢದ ವಿಶೇಷ : 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನ
ಮೈಸೂರು , ಶುಕ್ರವಾರ, 30 ಜೂನ್ 2023 (12:08 IST)
ಮೈಸೂರು : ಆಷಾಢ ಮಾಸ ಹಿನ್ನೆಲೆಯಲ್ಲಿ 2ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ.

ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಗೆ ನೀಡುತ್ತಿದ್ದಾರೆ.

ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸುವಂತೆ ಮಾಡಿದ್ದು, ಬಗೆಬಗೆಯ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಳಗ್ಗಿನ ಜಾವ 5:30ರಿಂದಲೇ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಮಾಲೀಕರೇ ಹುಷಾರ್ : ಲಿವಿಂಗ್ ರಿಲೇಷನ್ಶಿಪ್ನಲ್ಲೇ ಇದ್ದು ಮನೆ ದೋಚಿದ ಖತರ್ನಾಕ್ ಜೋಡಿ