Publish Date: Tue, 12 Jun 2018 (08:26 IST)
Updated Date: Tue, 12 Jun 2018 (08:29 IST)
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯ ತಪಾಸಣೆ ಮತ್ತು ಪರೀಕ್ಷೆಗಾಗಿ ವಾಜಪೇಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ. ಇತ್ತೀಚಿಗೆ ವಾಜಪೇಯಿ ವಯೋಸಹಜ ಖಾಯಿಲೆಯಿಂದಾಗಿ ಹಾಸಿಗೆ ಹಿಡಿದಿದ್ದರು. ಹೀಗಾಗಿ ಕೆಲವು ವರ್ಷಗಳಿಂದ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.
ವಾಜಪೇಯಿ ಮೂತ್ರ ಪಿಂಡ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಿಜೆಪಿ ದಿಗ್ಗಜ ನಾಯಕನನ್ನು ಪಕ್ಷದ ಪ್ರಮುಖ ನಾಯಕರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಸ್ಪತ್ರೆಗೆ ತೆರಳಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.